ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯ ತನಿಖಾ ಸಂಸ್ಥೆ ಸ್ಥಾಪನೆಯಾಗಲಿದೆ
ಜಮ್ಮು ಮತ್ತು ಕಾಶ್ಮೀರ ಆಡಳಿತವು ಕೇಂದ್ರಾಡಳಿತ ಪ್ರದೇಶದಲ್ಲಿ ರಾಜ್ಯ ತನಿಖಾ ಸಂಸ್ಥೆ ಸ್ಥಾಪನೆಗೆ ತನ್ನ ಅನುಮೋದನೆ ನೀಡಿದೆ. J&K ನಲ್ಲಿರುವ SIA ನೋಡಲ್ ಏಜೆನ್ಸಿಯಾಗಿದ್ದು ಅದು ಕೇಂದ್ರೀಯ ತನಿಖಾ ಏಜೆನ್ಸಿಗಳೊಂದಿಗೆ ಸಮನ್ವಯ ಸಾಧಿಸುತ್ತದೆ.
ಎಲ್‌ಜಿ ಮನೋಜ್ ಸಿನ್ಹಾ ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿದ ಆಡಳಿತ ಮಂಡಳಿ (ಎಸಿ) ಜಮ್ಮು ಮತ್ತು ಕಾಶ್ಮೀರದಲ್ಲಿ ಎಸ್‌ಐಎ ಸ್ಥಾಪನೆಗಾಗಿ ವಿವಿಧ ವರ್ಗಗಳ ಅಡಿಯಲ್ಲಿ ಹೊಸ ಹುದ್ದೆಗಳನ್ನು ಸೃಷ್ಟಿಸುವ ಗೃಹ ಇಲಾಖೆಯ ಪ್ರಸ್ತಾವನೆಯನ್ನು ಅನುಮೋದಿಸಿತು.
ಆಡಳಿತ ಮಂಡಳಿಯ ಸಭೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ರವರ ಸಲಹೆಗಾರರು, ಜೆ & ಕೆ ಮುಖ್ಯ ಕಾರ್ಯದರ್ಶಿ ಮತ್ತು ಲೆಫ್ಟಿನೆಂಟ್ ಗವರ್ನರ್ ರ ಪ್ರಧಾನ ಕಾರ್ಯದರ್ಶಿ ಭಾಗವಹಿಸಿದ್ದರು. ಎಲ್‌ಜಿ ಮನೋಜ್ ಸಿನ್ಹಾ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ ಆಡಳಿತ ಮಂಡಳಿಯು ವಿವಿಧ ವಿಭಾಗಗಳಲ್ಲಿ ಈ ಕೆಳಗಿನಂತೆ 252 ಹುದ್ದೆಗಳನ್ನು ಸೃಷ್ಟಿಸಲು ಅನುಮೋದನೆ ನೀಡಿದೆ.
- ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿ)
- ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳು (SSP)
- ಪೊಲೀಸ್ ವರಿಷ್ಠಾಧಿಕಾರಿಗಳು (SP)
- ಡೆಪ್ಯೂಟಿ ಡೈರೆಕ್ಟರ್ ಆಫ್ ಪ್ರಾಸಿಕ್ಯೂಷನ್ (DDP)
- ಮುಖ್ಯ ಪ್ರಾಸಿಕ್ಯೂಷನ್ ಅಧಿಕಾರಿಗಳು (CPO)
- ಉಪ ಪೊಲೀಸ್ ವರಿಷ್ಠಾಧಿಕಾರಿಗಳು (Dy.SP)
- ಹಿರಿಯ ಪ್ರಾಸಿಕ್ಯೂಷನ್ ಅಧಿಕಾರಿಗಳು (Sr. PO)
- ಇನ್‌ಸ್ಪೆಕ್ಟರ್‌ಗಳು ಮತ್ತು ಸಬ್-ಇನ್‌ಸ್ಪೆಕ್ಟರ್‌ಗಳು (SI)
ರಾಜ್ಯ ತನಿಖಾ ಸಂಸ್ಥೆಯ ಅಧಿಕಾರ ವ್ಯಾಪ್ತಿಯ ಪ್ರಾದೇಶಿಕ ವಿಭಾಗದ ಪ್ರಕಾರ, ಜಮ್ಮು ಮತ್ತು ಕಾಶ್ಮೀರ ಪ್ರಾಂತ್ಯಗಳಿಗೆ ತಲಾ ಒಂದರಂತೆ ಎರಡು ವಿಭಾಗಗಳು ಇರುತ್ತವೆ ಮತ್ತು ಪ್ರತಿ ಪ್ರಾಂತ್ಯಕ್ಕೆ ಒಬ್ಬ ಎಸ್‌ಎಸ್‌ಪಿ ಶ್ರೇಣಿಯ ಅಧಿಕಾರಿ ನೇತೃತ್ವ ವಹಿಸುತ್ತಾರೆ.
J&K ನಲ್ಲಿ ರಾಜ್ಯ ತನಿಖಾ ಸಂಸ್ಥೆಯನ್ನು ಕುರಿತು
- ರಾಜ್ಯ ತನಿಖಾ ಸಂಸ್ಥೆ (SIA) ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಇತರ ಕೇಂದ್ರೀಯ ಏಜೆನ್ಸಿಗಳೊಂದಿಗೆ ಸಮನ್ವಯಗೊಳಿಸಲು ನೋಡಲ್ ಏಜೆನ್ಸಿಯಾಗಿರುತ್ತದೆ.
- ಭಯೋತ್ಪಾದನೆ-ಸಂಬಂಧಿತ ಪ್ರಕರಣಗಳ ತ್ವರಿತ ಮತ್ತು ಪರಿಣಾಮಕಾರಿ ತನಿಖೆ ಮತ್ತು ವಿಚಾರಣೆಗೆ ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳುವ ಆದೇಶದೊಂದಿಗೆ ರಚನೆಯಾಗಲಿದೆ.
What's Your Reaction?